ಲೋಕಸಭಾ ಚುನಾವಣೆ ಎದುರಿಸಲು ಗ್ಯಾರೆಂಟಿ ಭರವಸೆಯೇ ಅಸ್ತ್ರ!

Team Newsnap
1 Min Read

ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಭರವಸೆ ನೀಡಿರುವ ಗ್ಯಾರೆಂಟಿ ಭರವಸೆಗಳ ಜಾರಿ ಹಾಗೂ ಬಿಜೆಪಿ ವೈಫಲ್ಯಗಳ ಪ್ರಚಾರವೇ ಪ್ರಮುಖ ಅಸ್ತ್ರವಾಗಲಿದೆ.

ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗೆ ನಡೆದ ರಾಜ್ಯ ನಾಯಕರ ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಮಹತ್ವದ ವಿಷಯಗಳು ಚರ್ಚೆಯಾಗಿವೆ.

ಮಣಿಪುರದ ದಂಗೆ, ಬಿಜೆಪಿ ವೈಫಲ್ಯಗಳು ಮುಂತಾದವುಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದು, ರಾಜ್ಯನಾಯಕರೆಲ್ಲಾ ಒಗ್ಗಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಹಾಗೂ ಅವಶ್ಯಕತೆ ಬಿದ್ದರೆ ಸಚಿವರೂ ಸಹ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿರಬೇಕೆಂದು ಸೂಚಿಸಿದ್ದಾರೆ.

ಮೂರು ಹಂತಗಳಲ್ಲಿ ನಡೆದ ಸಭಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣ್ ದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಉಪಸ್ಥಿತರಿದ್ದು, ರಾಜ್ಯದ 37 ನಾಯಕರು ಸಭೆಯಲ್ಲಿ ಹಾಜರಿದ್ದರು.

ಎರಡು ತಾಸುಗಳ ಕಾಲ ನಡೆದ ಸುಧೀರ್ಘ ಸಭೆಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ವರಿಷ್ಠರು ರಾಜ್ಯ ನಾಯಕರಿಗೆ ತಾಕೀತು ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನಗಳನ್ನು ಬಗಲಿಗೆ ಹಾಕಿಕೊಳ್ಳಲು ತಂತ್ರ ರೂಪಿಸಿದ್ದಾರೆನ್ನಲಾಗಿದೆ.

Share This Article
Leave a comment