October 17, 2021

Newsnap Kannada

The World at your finger tips!

ಮಂಡ್ಯದ ಕೆ ಆರ್ ಪೇಟೆಯಲ್ಲಿ 30 ಜನರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ

Spread the love

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಚ್ಚು ನಾಯಿಯೊಂದು 30 ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.

ಕೆಆರ್‌ಪೇಟೆ ತಾಲೂಕಿನ ಮಾಕವಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿಯಲ್ಲಿ ಓಡಾಡುತ್ತಿರುವ ಹುಚ್ಚು ಹಿಡಿದ ನಾಯಿ ಸಿಕ್ಕ ಸಿಕ್ಕವರ ಮನಸೋ ಇಚ್ಛೆ ದಾಳಿ ಮಾಡುತ್ತಿದೆ.

ಕಬ್ಬು ಕಟಾವು ಮಾಡಲು ಗ್ರಾಮಕ್ಕೆ ಆಗಮಿಸಿದ ಕೂಲಿ ಕಾರ್ಮಿಕರ ಮೇಲೂ ನಾಯಿ ದಾಳಿ ಮಾಡಿ ಕಚ್ಚಿದೆ.

ಸದ್ಯ ಹುಚ್ಚುನಾಯಿ ಕಡಿತಕ್ಕೆ ಒಳಗಾದ ಜನರಿಗೆ ಕೆಆರ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಹಲವರು ನಾಯಿ ದಾಳಿಗೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.

ಹುಚ್ಚು ನಾಯಿಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಸಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

error: Content is protected !!