July 7, 2022

Newsnap Kannada

The World at your finger tips!

accident

ಮೈಸೂರಿನಲ್ಲಿ ಭೀಕರ ಅಪಘಾತ, 40ಕ್ಕೂ ಹೆಚ್ಚು ಮಂದಿಗೆ ಗಾಯ, ಕೆಲವರ ಪರಿಸ್ಥಿತಿ ಗಂಭೀರ..

Spread the love

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಬಳಿ ಹಾಸನ‌-ಮೈಸೂರು ಹೆದ್ದಾರಿಯಲ್ಲಿ ಬಸ್ ಮತ್ತು ಕ್ಯಾಂಟರ್ ಮುಖಾಮುಖಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಅಪಘಾತದಲ್ಲಿ 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಪರಿಸ್ಥಿತಿ ಗಂಭೀರವಾಗಿದೆ.

ಇದನ್ನು ಓದಿ :ಚೀನಾದ ಶಾಂಘೈನಲ್ಲಿ ಕರೋನಾದಿಂದಾಗಿ ಕಳೆದ ತಿಂಗಳು ಒಂದೇ ಒಂದು ಕಾರು ಕೂಡ ಮಾರಾಟವಾಗಿಲ್ಲ

ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಅನೇಕ ‌ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ತಾಲೂಕು ಹಾಗೂ‌ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಧಾವಿಸಿ ಅಗತ್ಯ ಕ್ರಮಕೈಗೊಂಡಿದ್ದಾರೆ.

error: Content is protected !!