ಮಲಯಾಳಂನ ಮತ್ತೊಬ್ಬ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್‍ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿದ್ದಾಳೆ.
ಯುವತಿ ಕೋಝಿಕೋಡ್ ನಿವಾಸಿ. ವಿಜಯ್ ಬಾಬು ವಿರುದ್ಧ ಅತ್ಯಾಚಾರ ಹಾಗೂ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದರೂ, ಇದುವರೆಗೂ ಪೊಲೀಸರು ವಿಜಯ್ ಬಾಬುವನ್ನು ಕರೆಸಿ ವಿಚಾರಣೆ ನಡೆಸಿಲ್ಲ. ಬದಲಾಗಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಫ್ರೈಡೇ ಫಿಲ್ಮ್ ಹೌಸ್ ಸಿನಿಮಾ ನಿರ್ಮಾಣ ಸಂಸ್ಥೆ ಸ್ಥಾಪಕರಾಗಿರುವ ವಿಜಯ್ ಬಾಬು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದಾರೆ. 1983ರಲ್ಲಿ ಬಾಲ ನಟನಾಗಿ ಮಲೆಯಾಳಂ ಸಿನಿಮಾಗೆ ಎಂಟ್ರಿಕೊಟ್ಟ ವಿಜಯ್ ಬಾಬು ಸದ್ಯ ಬಾರಿ ಬೇಡಿಕೆಯ ನಟನಾಗಿ ಹೊರಹೊಮ್ಮಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ