ತನಗೆ ಸಾಲ ನೀಡಿದವರು ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ವ್ಯಕ್ತಿಯೊಬ್ಬರು ತನಗೆ ತಾನೇ ಚಾಕುವಿನಿಂದ ಇರಿದುಕೊಂಡು ಸಾರ್ವಜನಿಕರು, ಪೊಲೀಸ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ನಡೆದಿದೆ.
ರಾಧಾಕೃಷ (೪೫) ಎಂಬುವವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆತ್ಮಹತ್ಯಗೆ ಯತ್ನಿಸಿದವರು. ಸಾಲ ನೀಡಿದವರ ಕಿರುಕುಳವನ್ನು ಸಹಿಸಲಾಗುತ್ತಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿ ಸಾರ್ವಜನಿಕರು ಮತ್ತು ಪೊಲೀಸ್ ಎದುರೇ ಎದೆಗೆ ಚಾಕುವಿನಿಂದ ಚುಚ್ಚಿಕೊಂಡಿದ್ದಾರೆ.
ಇದನ್ನು ಕಂಡ ಪೊಲೀಸರು ಕೂಡಲೇ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಗಿದ್ದಾರೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿವರ ವಿಚಾರಣೆ ಬಳಿಕ ತಿಳಿಯಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ