8 ವರ್ಷದ ಮಗು ಸಮೇತ ತಾಯಿ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರಿನಲ್ಲಿ ಜರುಗಿದೆ.
ಉಮಾದೇವಿ (45), 8 ವರ್ಷದ ಹೆಣ್ಣು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ಮಕ್ಕಳ ಸಮೇತ ನದಿಗೆ ಹಾರಲು ತಾಯಿ ಬಂದಿದ್ದರು. ಆದರೆ
ಇನ್ನಿಬ್ಬರು ಮಕ್ಕಳು ತಾಯಿ ಕೈಯಿಂದ ತಪ್ಪಿಸಿಕೊಂಡು ಬಚಾವ್ ಆಗಿದ್ದಾರೆ.
ಕೊರೊನಾ ನೀಡಿದ ಸಂಕಷ್ಟಕ್ಕೆ ಸೋತು ಹೋದ ಅಮ್ಮ ನದಿಗೆ ಹಾರಲು ಪ್ರಚೋದನೆ ನೀಡುತ್ತಿದ್ದಾಳೆ ಅನ್ನೋದು ಗೊತ್ತಾಗುತ್ತಿದ್ದಂತೆ ಇಬ್ಬರು ಹೆಣ್ಮಕ್ಕಳು ಓಡಿ ತಪ್ಪಿಸಿಕೊಂಡಿದ್ದಾರೆ. ಮಹಿಳೆಗೆ ನಾಲ್ವರು ಹೆಣ್ಣುಮಕ್ಕಳಿದ್ದಾರೆ. ಅವರಲ್ಲಿ ಹಿರಿಯ ಮಗಳು ಗದಗದ ಕಾಲೇಜು ಒಂದರಲ್ಲಿ ಓದುತ್ತಿದ್ದಾಳೆ ಎನ್ನಲಾಗಿದೆ.
ಈ ಕುಟುಂಬ ಸಾಲದ ಸುಳಿಗೆ ಸಿಲುಕಿತ್ತು, ಮೂರು ತಿಂಗಳ ಹಿಂದಷ್ಟೇ ಮಹಿಳೆಯ ಪತಿ ಸಂಗಮೇಶ ಕೊರೊನಾದಿಂದ ಸಾವನ್ನಪ್ಪಿದ್ದರು. ರೋಣ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ