ಶಶಿಕಲಾ ನಟರಾಜನ್ – ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ

Team Newsnap
1 Min Read

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಒಳಗೆ ವಿಶೇಷ ಸೌಲಭ್ಯ ಹೊಂದಿದ್ದರು, ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರನ್ನು ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಪಡಿಸಲಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣದಲ್ಲಿ ಇಳವರಸಿ ನಾಲ್ಕನೇ ಆರೋಪಿಯಾಗಿದ್ದಾರೆ.

shshi ilavarasi

ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶ್ಯೂರಿಟಿಗಳಿಗೂ ಕೂಡ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ದಾಖಲಿಸಿದ್ದರು. ಜೈಲು ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್‍ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು.

ಸೋಮವಾರ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.

Share This Article
Leave a comment