ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆರ್‍ಯಾಲಿ ವೇಳೆ ರ್‍ಯಾಲಿ ಕಾರಿಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು ಮೃತಪಟ್ಟಿದ್ದಾನೆ.
ಈ ದುರ್ಘಟನೆ ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ನಡೆದಿದ್ದು, ಬಿಜೆಪಿ ಮುಖಂಡ ಮಾಡಿದ ಒಂದು ಸಣ್ಣ ಎಡವಟ್ಟಿನಿಂದ ಅಪಘಾತ ನಡೆದಿದೆ .
ಪ್ರಕಾಶ್(55) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದ್ದು , ಈತ ಕೆ.ಆರ್.ಪುರದ ಟಿ.ಸಿ.ಪಾಳ್ಯದ ನಿವಾಸಿಯಾಗಿದ್ದಾನೆ.
ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು , ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಪ್ರಕಾಶ್‌ಗೆ ಗುದ್ದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ,ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.CM ತವರಿನಲ್ಲೇ ಮತ ಕೇಳಲು ಹೋದ ಯತೀಂದ್ರನಿಗೆ ಗ್ರಾಮಸ್ಥರಿಂದ ತರಾಟೆ
ಮೃತದೇಹವನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ,ಸ್ಥಳಕ್ಕೆ ಕೆ.ಆರ್. ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು