ಗೃಹ ಸಚಿವರ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ

Team Newsnap
1 Min Read

ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ.

ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು ಯತ್ನಿಸಿದ್ದಾರೆ .ಹೊಸ ಆಹಾರ ಭದ್ರತಾ ಯೋಜನೆಗೆ ‘PM ಗರೀಬ್ ಕಲ್ಯಾಣ್ ಅನ್ನ ಯೋಜನೆ’ – ಕೇಂದ್ರ

ಮಂಗಳವಾರ ಮದ್ಯಾಹ್ನ ವೇಳೆಗೆ ಈ ಘಟನೆ ನಡೆದಿದೆ CAR ನವೀನ್ ಎಂಬ ಪೊಲೀಸ್​ ಪೇದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣವೇ ಅಲ್ಲಿದ್ದ ಸಿಬ್ಬಂದಿ ನವೀನ್​ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗೃಹ ಸಚಿವರ ಭಧ್ರತೆಗಾಗಿ ಪೊಲೀಸ್​ ಪೇದೆ ನವೀನ್​ ಅವರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೇ ಇವರು ಆತ್ಮಹತ್ಯೆಗೆ ಯತ್ನಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Share This Article
Leave a comment