ಕಾನ್‌ಸ್ಟೇಬಲ್ ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.
ಪ್ರಭಾಕರನ್ ಮೃತ ಪೇದೆ ಈತ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಇವರು ಕನಸಿನಲ್ಲಿ ಬರುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಭಾಕರನ್ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳು. ಯಾಕೆ ತನಗೆ ಹೀಗೆ ಕನಸು ಬೀಳುತ್ತಿದೆ ಎಂಬ ಬಗ್ಗೆ ಪ್ರಭಾಕರನ್ ಜ್ಯೋತಿಷಿಯನ್ನು ಸಂಪರ್ಕಿಸಿದ್ದರು. ಅವರು ಇದು ಪ್ರೇತ ಕಾಟವಿರಬಹುದು ಎಂದಿದ್ದರು.
ಹೀಗಾಗಿ 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ತನ್ನ ಪೊಲೀಸ್ ಕ್ವಾರ್ಟರ್ಸ್‍ನ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡಿದ್ದರು.
ಪ್ರಭಾಕರನ್ ಪತ್ನಿ ಮತ್ತು ಮಕ್ಕಳನ್ನು ಸಂಬಂಧಿಕರ ಮನೆಗೆ ಹೋಗಿದ್ದರು. ಇವರು ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಆಗಿದ್ದರು.
ಕನಸಿನಲ್ಲಿ ಕಾಡುತ್ತಿದ್ದ ದೆವ್ವದ ಭಯದಿಂದ ಪ್ರಭಾಕರನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕ್ವಾರ್ಟರ್ಸ್‍ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು ಎಂದು ಪ್ರಭಾಕರನ್ ಮನೆಯವರ ಬಳಿ ಹೇಳಿದ್ದಾರೆ. ಈ ಕುರಿತಾಗಿ ಕಡಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ