ಅಫ್ಗಾನಿಸ್ತಾನದಲ್ಲಿ ಪ್ರಬಲ ಭೂಕಂಪನ: 250ಕ್ಕೂ ಹೆಚ್ಚು ಸಾವು

Team Newsnap
1 Min Read

ಅಫ್ಘಾನಿಸ್ತಾನದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ 255 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ , ಅಫ್ಘಾನಿಸ್ತಾನದಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

WhatsApp Image 2022 06 22 at 1.27.04 PM

ಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 51 ಕಿ.ಮೀ ಆಳದಲ್ಲಿ ಸುಮಾರು 44 ಕಿ.ಮೀ (27 ಮೈಲಿ) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ಜಿಎಸ್ ತಿಳಿಸಿದೆ.

ಭೂಕಂಪನ ಸಂಭವಿಸಿರುವ ಪಕ್ತಿಕಾ ಪ್ರಾಂತ್ಯದಲ್ಲಿ 90 ಮನೆಗಳು ನಾಶವಾಗಿವೆ. ಅನೇಕ ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪಾಕಿಸ್ತಾನ ಗಡಿಯ ಸಮೀಪವಿರುವ ಪಕ್ತಿಕಾ ಪ್ರಾಂತ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ಹೆಲಿಕಾಪ್ಟರ್‌ಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

‘ಪಕ್ತಿಕಾ ಪ್ರಾಂತ್ಯದ ನಾಲ್ಕು ಜಿಲ್ಲೆಗಳಲ್ಲಿ ತೀವ್ರವಾದ ಭೂಕಂಪನ ಸಂಭವಿಸಿದೆ. ಹತ್ತಾರು ಮನೆಗಳು ನಾಶವಾಗಿದ್ದು, ನೂರಾರು ಜನ ಮೃತಪಟ್ಟಿದ್ದಾರೆ. ದುರಂತದಲ್ಲಿ ಅನೇಕರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್ ಸರ್ಕಾರದ ಉಪ ವಕ್ತಾರ ಬಿಲಾಲ್ ಕರಿಮಿ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಇತರೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.

ಮಾನವೀಯತೆಗಾಗಿ ಯೋಗ: ಮೈಸೂರು ಆಧ್ಯಾತ್ಮಿಕ ಕೇಂದ್ರ ಪ್ರಧಾನಿ ಮೋದಿ ಬಣ್ಣನೆ

2015ರಲ್ಲಿ ಈಶಾನ್ಯ ಅಫ್ಗಾನಿಸ್ತಾನದಲ್ಲಿ ಸಂಭವಿಸಿದ್ದ ಭೂಕಂಪನದಲ್ಲಿ 200ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. 2002ರಲ್ಲಿ ಉತ್ತರ ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪನದಲ್ಲಿ 1 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದರು.

Share This Article
Leave a comment