ಅಫ್ಘಾನಿಸ್ತಾನದಲ್ಲಿ ಜನರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ವೇಳೆಯಲ್ಲಿ ಜನಪ್ರಿಯ ಸ್ಥಳೀಯ ಹಾಡುಗಾರ ಫವಾದ್ ಕಿಶನಾಬಾದ್ ಅವರನ್ನು ತಾಲಿಬಾನ್ ಉಗ್ರರು ಹತ್ಯೆ ಮಾಡಿದ್ದಾರೆ.
ಅಫ್ಘಾನಿಸ್ತಾನದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದನ್ನು ತಾಲಿಬಾನಿಗಳು ನಿಷೇಧಿಸಿದ್ದಾರೆ.
ಹಾಡುಗಾರ ಫವಾದ್ ಕಿಶನಾಬಾದ್ ತಾಲಿಬಾನ್‍ಗೆ ವಿರುದ್ದವಾಗಿ ಹಾಡುಗಳನ್ನು ಕಟ್ಟಿ ಹಾಡುತ್ತಿದ್ದರು ಎನ್ನಲಾಗಿದೆ.
ಈ ಹಿನ್ನೆಯಲ್ಲಿ ತಾಲಿಬಾನಿಗಳು ಫವಾದ್‍ರನ್ನು ಹುಡುಕಿ ಹತ್ಯೆ ಮಾಡಿದ್ದಾರೆ. ಅಂದ್ರಾಬ್ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ದೃಢಪಡಿಸಿದೆ.
ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ. ಆಗಸ್ಟ್ 15ರಂದು ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ