February 19, 2026

Newsnap Kannada

The World at your finger tips!

rakshita

ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯೊಬ್ಬಳು ಅಪಘಾತಕ್ಕೆ ಬಲಿ

Spread the love

ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಹುಟ್ಟುಹಬ್ಬದ ದಿನ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ರಕ್ಷಿತಾ ಮೃತ ದುರ್ದೈವಿ.

ನಿನ್ನೆ (ಸೋಮವಾರ) ರಾತ್ರಿ ಹುಟ್ಟುಹಬ್ಬದ ಹಿನ್ನೆಲೆ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಯಾಗಿದ್ದು ,ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾಳೆ.

ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.BMTC ಬಸ್ ನಡುರಸ್ತೆಯಲ್ಲೇ ಸುಟ್ಟುಭಸ್ಮ

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!