ಚಾಲಕನ ಅಜಾರೂಕತೆಯಿಂದ ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವಿಗೀಡಾದ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲ ಗೇಟ್‌ನ ಜೈನ್ ಶಾಲೆ ಬಳಿ ನಡೆದಿದೆ.
ಕುಮಾರಿ ನೂರ್ ಫಿಜ (19) ಮೃತ ವಿದ್ಯಾರ್ಥಿನಿ. ಶಾಲೆ ಮುಗಿಸಿಕೊಂಡು ಮಹದೇವಪುರ ಕ್ಷೇತ್ರದ ವೈಟ್ ಫೀಲ್ಡ್ – ಹೊಸಕೋಟೆ ಮಾರ್ಗವಾಗಿ ಕನ್ನಮಂಗಲ ಬಳಿ ಹೋಗುತ್ತಿದ್ದಾಗ ಕ್ರೇನ್ ಚಾಲಕನ ಹಿಂಬದಿಯಿಂದ ಬಂದು ಗುದ್ದಿ, ವಿದ್ಯಾರ್ಥಿನಿ ಮೇಲೆ ಕ್ರೇನ್ ಹತ್ತಿಸಿದ್ದಾನೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಲ್ಯ ಪರ ವಾದ ಮಾಡಲ್ಲ : ಆತನ ಸಂಪರ್ಕವೇ ಇಲ್ಲ ಸುಪ್ರೀಂ ಮುಂದೆ ವಕೀಲನ ಅಳಲು
ಅಪಘಾತಕ್ಕೀಡಾಗಿ ರಕ್ತಸಿಕ್ತವಾಗಿ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ವೈಟ್ ಫೀಲ್ಡ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಕ್ರೇನ್ ಮಾಲೀಕ ಪೆರಿಯಸ್ವಾಮಿ ವಿರುದ್ಧ ಯುವತಿ ತಂದೆ ರೆಹಮಾನ್ ಖಾನ್ ವೈಟ್ ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ





More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು