March 11, 2026

Newsnap Kannada

The World at your finger tips!

nimhans

ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾಥಿ೯ನಿ

Spread the love

ಕಾಲೇಜಿನ ಎರಡನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಟಿ ಸಿ ಪಾಳ್ಯದ ನಿವಾಸಿ ಮೀನಾ (19) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ.

ಜೀವನ್ ಭೀಮಾನಗರದ ಮಹಿಮಾ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ಮೀನಾ ಕಾಲೇಜಿಗೆ ಅಕ್ಕನ ಮನೆಯಿಂದ ಬರುತ್ತಿದ್ದಳು.

ಇಂದು ಕಾಲೇಜಿನಲ್ಲಿ ಪ್ರಾರ್ಥನೆ ನಡೆಯುವಾಗ ಮೀನಾ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಾಳೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆಯಿಂದಾಗಿ ವಿದ್ಯಾರ್ಥಿನಿಯ ತಲೆ ಮತ್ತು ಕಾಲಿಗೆ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ವಿದ್ಯಾರ್ಥಿನಿಯನ್ನು ದಾಖಲಿಸಲಾಗಿದೆ.

ಘಟನೆ ಸಂಬಂಧಿಸಿದಂತೆ ಸ್ಥಳಕ್ಕೆ ಜೀವನ್ ಭೀಮಾನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

error: Content is protected !!