KSRTC ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು,ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಈ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾತ್ರವಲ್ಲದೆ ಇಬ್ಬರು ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿವೆ. ಗಾಯಗೊಂಡಿರುವ ಇತರ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಖಾಸಗಿ ಬಸ್ ಶಿವಮೊಗ್ಗದಿಂದ ಶೃಂಗೇರಿಗೆ ಹಾಗೂ ಸರ್ಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಸಾಗುತ್ತಿತ್ತು. ಖಾಸಗಿ ಬಸ್ನಲ್ಲಿ 35ಕ್ಕೂ ಹೆಚ್ಚು ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.
ಅನಾಗರಿಕ, ವಿಕೃತ ರಾಜಣ್ಣಗೆ ತಕ್ಕ ಪಾಠ ಕಲಿಸುತ್ತೇನೆ – ಮಾಜಿ ಸಿಎಂ HDK ಗುಡುಗು
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.. ಈ ವಿಷಯ ತಿಳಿದು ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ