Main News

ಬಸ್​ಗಳ ಮಧ್ಯೆ ಭೀಕರ ಅಪಘಾತ:ಚಾಲಕನಿಗೆ ಗಂಭೀರ ಗಾಯ, 50ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು

KSRTC ಮತ್ತು ಖಾಸಗಿ ಬಸ್​ ಮಧ್ಯೆ ಅಪಘಾತ ಸಂಭವಿಸಿದ್ದು,ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಈ ಅಪಘಾತ ಸಂಭವಿಸಿದೆ.

ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾತ್ರವಲ್ಲದೆ ಇಬ್ಬರು ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿವೆ. ಗಾಯಗೊಂಡಿರುವ ಇತರ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಖಾಸಗಿ ಬಸ್​ ಶಿವಮೊಗ್ಗದಿಂದ ಶೃಂಗೇರಿಗೆ ಹಾಗೂ ಸರ್ಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಸಾಗುತ್ತಿತ್ತು. ಖಾಸಗಿ ಬಸ್​ನಲ್ಲಿ 35ಕ್ಕೂ ಹೆಚ್ಚು ಮತ್ತು ಕೆಎಸ್​ಆರ್​ಟಿಸಿ ಬಸ್​​ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಅನಾಗರಿಕ, ವಿಕೃತ ರಾಜಣ್ಣಗೆ ತಕ್ಕ ಪಾಠ ಕಲಿಸುತ್ತೇನೆ – ಮಾಜಿ ಸಿಎಂ HDK ಗುಡುಗು

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.. ಈ ವಿಷಯ ತಿಳಿದು ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024