ಭೀಕರ ರಸ್ತೆ ಅಪಘಾತ; BBMP ಆರೋಗ್ಯ ನಿರೀಕ್ಷಕ ಸ್ಥಳದಲ್ಲೇ ಸಾವು

Team Newsnap
0 Min Read

ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಪ್ರಶಾಂತ್ ನಾಯಕ್ (27) ಮೃತ ಹೆಲ್ತ್ ಇನ್ಸ್ ಪೆಕ್ಟರ್. ಸ್ಯಾಂಕಿ ಕೆರೆಯ ಟಿ.ಚೌಡಯ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಪ್ರಶಾಂತ್ ನಾಯಕ್ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪ್ರಶಾಂತ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜೆ.ಪಿ. ನಗರ ನಿವಾಸಿಯಾಗಿರುವ ಪ್ರಶಾಂತ್ ನಾಯಕ್, ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment