ಹುಬ್ಬಳ್ಳಿಯ ಅಕ್ಷಯ ಪಾಕ್೯ ಸಮೀಪದ ರಾಜೀವ್ ಗಾಂಧಿ ನಗರದಲ್ಲಿರುವ ನೀರಾವರಿ ಇಲಾಖೆಯ ಎಕ್ಸಿಕ್ಯುಟಿವ್ ಎಂಜಿನಿಯರ್ ದೇವರಾಜ್ ಶಿಗ್ಗಾಂವಿ ನಿವಾಸದ ಮೇಲೆ 10ಕ್ಕೂ ಹೆಚ್ಚಿನ ಎಸಿಬಿ ಅಧಿಕಾರಿಗಳ ತಂಡ ಮಂಗಳವಾರ ಬೆಳಗ್ಗೆ ದಾಳಿ ಮಾಡಿದೆ.
ಅಧಿಕಾರಿಯ ಪಾಲಿಗೆ ಮಂಗಳವಾರ ಅಮಂಗಳವಾಗಿದೆ. ಮಂಗಳವಾರ ಬೆಳಗ್ಗೆ ಮೂರು ವಾಹನಗಳಲ್ಲಿ ಆಗಮಿಸಿದ ಎಸಿಬಿ ಅಧಿಕಾರಿಗಳು ಮನೆಯನ್ನು ತಲಾಶ್ ಮಾಡುತ್ತಿದ್ದಾರೆ. ಅಕ್ರಮ ಆಸ್ತಿ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಎಸಿಬಿ ದಾಳಿ ಆರಂಭವಾದಾಗಿಂದ ಮನೆಯ ಯಾವುದೇ ಸದಸ್ಯರನ್ನು ಹೊರಗೆ ಬಿಟ್ಟಿಲ್ಲ. ಅಷ್ಟೇ ಅಲ್ಲ, ಹಲವು ದಾಖಲಾತಿಗಳನ್ನು ಕೇಳಿ ಪಡೆಯುವ ಪ್ರಯತ್ನವನ್ನ ಅಧಿಕಾರಿಗಳು ಮಾಡುತ್ತಿದ್ದಾರೆಂದು ಹೇಳಲಾಗಿದೆ
ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವರಾಜ ಶಿಗ್ಗಾಂವಿ ಮನೆ ಹುಬ್ಬಳ್ಳಿಯಲ್ಲಿದೆ. ಕೆಲವು ವರ್ಷಗಳ ಹಿಂದೆ ದೇವರಾಜ, ಧಾರವಾಡದ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು. ಈಗ ನೀರಾವರಿ ಇಲಾಖೆಯ ಮುಖ್ಯ ಕಚೇರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ರಾಜೀವ್ ಗಾಂಧಿ ನಗರದಲ್ಲಿರುವ ಈಗಿನ ಮನೆಯನ್ನು 1 ಕೋಟಿ 53 ಲಕ್ಷಕ್ಕೆ ಖರೀದಿ ಮಾಡಿದ್ದರೆಂದು ಗೊತ್ತಾಗಿದೆ. ಈ ಕುರಿತಂತೆ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ