ಮನೆ ಮುಟ್ಟುಗೋಲು ಹಾಕಲು ಬಂದಿದ್ದ ಅಧಿಕಾರಿಗಳ ಎದುರಿನಲ್ಲೇ ಮಹಿಳೆ ಆತ್ಮಹತ್ಯೆ

Team Newsnap
2 Min Read

ಸಾಲಕ್ಕಾಗಿ ಒತ್ತೆ ಇಟ್ಟ ಮನೆಯನ್ನು ಮುಟ್ಟುಗೋಲು ಹಾಕಲು ಬಂದ ರಾಷ್ಟ್ರೀಕೃತ ಬ್ಯಾಂಕ್‌ನ ಸೀಸರ್‌ಗಳ ಸಮ್ಮುಖದಲ್ಲಿ ಮನೆಯ ಮಾಲಿಕರ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣಕನ್ನಡ ಪುತ್ತೂರಿನ ಹಾರಾಡಿ ರೈಲ್ವೇ ಗೇಟ್ ಬಳಿಯ ನಿವಾಸಿ ಪ್ರಾರ್ಥನಾ ಪ್ರಭು (52) ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿರುವ ಮಹಿಳೆ ತನ್ನ ಸಾವಿಗೆ ರಾಷ್ಟ್ರೀಕೃತ ಬ್ಯಾಂಕ್​ವೊಂದರ ಸಿಬ್ಬಂದಿಯೇ ಕಾರಣ ಎಂದು ಬರೆದುಕೊಂಡಿದ್ದಾರೆ.

ತನ್ನ ಕೊಠಡಿಯಲ್ಲಿನ ಸೀಲಿಂಗ್ ಫ್ಯಾನ್‌ಗೆ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಸೀಜ್ ಮಾಡಲು ಅಧಿಕಾರಿಗಳ ರಕ್ಷಣೆಗೆಂದು ಬಂದಿದ್ದ ಪೋಲೀಸರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಮಹಿಳೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.

‘ನನ್ನ ಸಾವಿಗೆ ಕೆನರಾ ಬ್ಯಾಂಕ್‌ನವರ ಕಿರುಕುಳ ಕಾರಣ. ಮೆಂಟಲ್ ಟಾರ್ಚರ್ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಆ ಮಹಿಳೆ ಸಾವಿಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು.

ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲವಿದ್ದು ಸಾಲ ಮರುಪಾವತಿ ಮಾಡಿಲ್ಲ ಎಂದು ಬ್ಯಾಂಕ್ ನೋಟೀಸ್ ಬಂದಿತ್ತು. ನಂತರ ಕೋರ್ಟ್ ನೋಟೀಸ್ ಮೂಲಕ ಮನೆ ಮುಟ್ಟುಗೋಲು ಹಾಕಲು ಫೆ. 18 ರಂದು ಬ್ಯಾಂಕ್ ಸೀಸರ್ ಜೊತೆ ಬಂದಾಗ ಮನೆ ಮಂದಿ ಆತಂಕಕ್ಕೊಳಗಾಗಿದ್ದರು. ಈ ನಡುವೆ ಪ್ರಾರ್ಥನಾ ಪ್ರಭು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಾರ್ಥನಾ ಪತಿ ರಘುವೀರ್ ಪ್ರಭು
ಪ್ರಕರಣ ನ್ಯಾಯಾಲಯದಲ್ಲಿರುವಾಗ ಮುಟ್ಟುಗೋಲು ಹಾಕದಂತೆ ಬ್ಯಾಂಕ್ ಮತ್ತು ಕೋರ್ಟು ಕಮೀಷನರ್ ಅಧಿಕಾರಿಗಳೊಂದಿಗೆ ವಿನಂತಿಸಿದರು.

ಇದನ್ನು ತಿರಸ್ಕರಿಸಿದ ಬ್ಯಾಂಕ್‌ನವರು ಮನೆಯ ಹಿಂಬದಿಯ ಬೀಗವನ್ನು ಒಡೆದು ಮನೆಯೊಳಗೆ ಪ್ರವೇಶಿಸಿದ್ದಾರೆ. ಇದೇ ಕ್ಷಣದಲ್ಲಿ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಮನೆಯೊಳಗಿನಿಂದ ಲಾಕ್ ಮಾಡಿ ಕೊಠಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಪ್ರಕರಣ ಕುರಿತು ಮೃತರ ಪತಿ ರಘುವೀರ್ ಪ್ರಭು ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share This Article
Leave a comment