ಹಾಸನದ ಸಕಲೇಶಪುರದ ತ್ರಿಕೋನ ಪ್ರೇಮ ಪ್ರಕರಣ ಸುಖಾಂತ್ಯ ಕಂಡಿದೆ.
ಸಕಲೇಶಪುರ ಮೂಲದ ಯುವಕ ಇಬ್ಬರ ಯುವತಿಯರನ್ನು ಪ್ರೀತಿಸಿದ್ದನಂತೆ. ತಾನು ಇಬ್ಬರನ್ನು ಪ್ರೀತಿಸುತ್ತಿರುವ ವಿಚಾರ ತನ್ನ ಪ್ರಿಯತಮೆಯರಿಗೆ ಗೊತ್ತಾಗದ ರೀತಿಯಲ್ಲಿ ನಾಟಕವಾಡಿಕೊಂಡು ಬಂದಿದ್ದಾನೆ.
ಕೊನೆಗೆ ತಮ್ಮನ್ನು ಮದುವೆಯಾಗುವಂತೆ ಇಬ್ಬರೂ ಯುವತಿಯರು ಯುವಕನ ಬೆನ್ನು ಬಿದ್ದಿದ್ದಾರೆ.
ಈ ವೇಳೆ ಯುವಕ ಇಬ್ಬರನ್ನು ಪ್ರೀತಿಸುತ್ತಿರುವುದು ಬೆಳಕಿಗೆ ಬಂದಿದೆ. ಇಬ್ಬರೂ ಯುವತಿಯರು ತನ್ನನ್ನೇ ಮದುವೆಯಾಗುವಂತೆ ಪಟ್ಟು ಹಿಡಿದಿದ್ದಾರೆ. ಓರ್ವ ಯುವತಿಯಂತೂ ವಿಷ ಸೇವಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಈ ತ್ರಿಕೋನ ಪ್ರೇಮಕಥೆಯ ಬಗ್ಗೆ ತಿಳಿದ ಪರಿಚಯಸ್ಥರು ಹಾಗೂ ಸಂಬಂಧಿಕರು ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ಕೊನೆಗೆ ಲಾಟರಿ ಎತ್ತಲು ಮುಂದಾಗಿದ್ದಾರೆ.
ಇಬ್ಬರು ಹುಡುಗಿಯರಲ್ಲಿ ಯಾರ ಹೆಸರು ಬರುತ್ತದೋ ಅವರ ಜೊತೆ ಮದುವೆ ಎಂದು ನಿರ್ಧಾರ ಮಾಡಿದ್ದಾರೆ.
ಇತ್ತ ಲಾಟರಿ ಎತ್ತಲು ಮುಂದಾಗುತ್ತಿದ್ದಂತೆಯೇ ಯುವಕ ವಿಷ ಸೇವಿಸಿದ್ದ ಯುವತಿಯನ್ನೇ ಮದುವೆಯಾಗುವುದಾಗಿ ಹೇಳಿದ್ದಾನೆ. ಕೊನೆಗೆ ಹಿರಿಯರೆಲ್ಲೂ ಸೇರಿ ಯುವಕ ಹಾಗೂ ವಿಷ ಸೇವಿಸಿದ್ದ ಯುವತಿಗೆ ಮದುವೆ ಮಾಡಿಸಿ ಪ್ರಕರಣಕ್ಕೆ ತೆರೆ ಎಳೆದರು.
ಆದರೆ ಈ ಪ್ರೀತಿ ತ್ಯಾಗ ಮಾಡಿದ ಯುವತಿ, ಛಾಲೆಂಜ್ ಮಾಡಿದ್ದಾಳೆ.
ನಿನಗಿಂತಲೂ ಚೆನ್ನಾಗಿ ಬದುಕಿ ತೋರಿಸ್ತೀನಿ.ನಾನು ನೀನು ಫ್ರೆಂಡ್ಸ್ ಆಗಿಯೇ ಇರೋಣ ಎಂದು ಹೇಳಿದ್ದಾಳೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ