ಮನೆಯವರಿಂದ ಪ್ರೀತಿಗೆ ತೀವ್ರ ವಿರೋಧ ನಡುವೆಯೂ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವತಿ ತನ್ನ ಪ್ರಿಯತಮನೊಂದಿಗೆ ವಿಷ ಸೇವಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಹಾವೇರಿ ಜಿಲ್ಲೆಯ ನಾಗನೂರು ಗ್ರಾಮದಲ್ಲಿ ಭಾನುವಾರ ಜರುಗಿದೆ.
ಇರ್ಷಾದ್ (23) ವಿದ್ಯಾಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು.
ವಿದ್ಯಾಶ್ರೀ , ಇರ್ಷಾದ್ ಬಹುವಾಗಿ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದವರ ವಿರೋಧವಿತ್ತು. ಇದೇ ವೇಳೆ ಮನೆಯವರೆಲ್ಲರೂ ಸೇರಿ ಬೇರೊಬ್ಬ ಯುವಕನೊಂದಿಗೆ ವಿದ್ಯಾಶ್ರೀಗೆ ನಿಶ್ಚಿತಾರ್ಥ ಮಾಡಿದ್ದರು.
ಯುವತಿ ನಿಶ್ಚಿತಾರ್ಥ ಮುಗಿದ ಬೆನ್ನಲ್ಲೇ ಇರ್ಷಾದ್ ಜೊತೆ ಪರಾರಿಯಾಗಿದ್ದಳು. ಮಗಳು ನಾಪತ್ತೆಯಾಗಿದ್ದಾಳೆ ಎಂದು ಕುಟುಂಬಸ್ಥರು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಆದರೆ ಇರ್ಷಾದ್ ಹಾಗೂ ವಿದ್ಯಾಶ್ರೀ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇರ್ಷಾದ್ ಜಮೀನಿನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ