February 21, 2026

Newsnap Kannada

The World at your finger tips!

lady

ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದ ಯುವತಿ!

Spread the love

ಚಲಿಸುತ್ತಿದ್ದ ರೈಲಿನಿಂದ ಯುವತಿಯೋರ್ವಳು ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಯುವತಿಯನ್ನು ಶಿವಮೊಗ್ಗದ ಗಾಡಿಕೊಪ್ಪದ ಸಹನಾ(24) ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಾಯಿ ಜೊತೆ ಇಂಟರ್ ಸಿಟಿ ರೈಲಿನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಜರುಗಿದೆ.

ಶಿವಮೊಗ್ಗ ನಗರದ ತುಂಗಾ ನದಿಯ ಬ್ರಿಡ್ಜ್ ಮೇಲೆ ರೈಲು ಸಂಚರಿಸುತ್ತಿದ್ದಾಗ ಯುವತಿ ಬಾಗಿಲ ಬಳಿ ನಿಂತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಳಂತೆ. ಈ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾಳೆ ಎಂದು ಯುವತಿಯ ತಾಯಿ ತಿಳಿಸಿದ್ದಾರೆ.

ಈ ಬಗ್ಗೆ ಪೋಷಕರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದು, ಘಟನೆ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತುಂಗಾನದಿಯಲ್ಲಿ ಯುವತಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

error: Content is protected !!