December 23, 2024

Newsnap Kannada

The World at your finger tips!

suicide , women , cheat

A young woman who was married 11 months ago committed suicide by hanging herself 11 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

11 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ 11 ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್​​​ನಲ್ಲಿ ನಡೆದಿದೆ.

ಶ್ವೇತಾ (27) ನೇಣಿಗೆ ಶರಣಾದ ಮಹಿಳೆ. ಈ ಘಟನೆಯು ನವೆಂಬರ್​​ 10ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ನಾಳೆಯಿಂದಲೇ ನಂದಿನಿ ಹಾಲು, ಮೊಸರಿನ ದರ 2 ರು ಏರಿಕೆ : ನೂತನ ಪರಿಷ್ಕೃತ ದರ ಹೀಗಿದೆ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. 11 ತಿಂಗಳ ಹಿಂದೆಯಷ್ಟೇ ಅಭಿಷೇಕ್ ಹಾಗೂ ಶ್ವೇತಾ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದರು.

ಆತ್ಮಹತ್ಯೆ ಮಾಡಿಕೊಂಡ ಪತ್ನಿ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಅಭಿಷೇಕ್​​​ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.


ಪತಿ ಮದುವೆಗೂ ಮುನ್ನ ಬೇರೆ ಯುವತಿಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರಂತೆ. ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ. ಹೀಗಾಗಿ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ವೇತಾ ನೇಣಿಗೆ ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಘಟನೆ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!