ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ 11 ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ನಲ್ಲಿ ನಡೆದಿದೆ.
ಶ್ವೇತಾ (27) ನೇಣಿಗೆ ಶರಣಾದ ಮಹಿಳೆ. ಈ ಘಟನೆಯು ನವೆಂಬರ್ 10ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ನಾಳೆಯಿಂದಲೇ ನಂದಿನಿ ಹಾಲು, ಮೊಸರಿನ ದರ 2 ರು ಏರಿಕೆ : ನೂತನ ಪರಿಷ್ಕೃತ ದರ ಹೀಗಿದೆ
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. 11 ತಿಂಗಳ ಹಿಂದೆಯಷ್ಟೇ ಅಭಿಷೇಕ್ ಹಾಗೂ ಶ್ವೇತಾ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದರು.
ಆತ್ಮಹತ್ಯೆ ಮಾಡಿಕೊಂಡ ಪತ್ನಿ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಅಭಿಷೇಕ್ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಪತಿ ಮದುವೆಗೂ ಮುನ್ನ ಬೇರೆ ಯುವತಿಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರಂತೆ. ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ. ಹೀಗಾಗಿ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ವೇತಾ ನೇಣಿಗೆ ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಘಟನೆ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ