ಕರ್ನಾಟಕದಲ್ಲೂ ಆಪ್ ಸರ್ಕಾರ ಬರಬೇಕು: ಅರವಿಂದ್ ಕೇಜ್ರಿವಾಲ್

Team Newsnap
2 Min Read

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಂತೆಯೇ ಆಮ್ ಆದ್ಮಿ ಪಾರ್ಟಿ ಸಿದ್ಧಗೊಂಡಿದೆ.

ಇದೇ ಮೊದಲ ಬಾರಿಗೆ ಆಪ್ ಸಂಚಾಲಕ ಕೇಜ್ರಿವಾಲ್ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಚಾರ ನಡೆಸಿದ್ದಾರೆ.

ಕರ್ನಾಟಕದಲ್ಲಿ ಆಪ್ ಸರ್ಕಾರ ಬರಬೇಕು. ನಾವು ಇಲ್ಲಿ ಸರ್ಕಾರ ರಚನೆ ಮಾಡೋಣ. ಈ ಮೂಲಕ ಶೇ 20 – ಶೇ 40ದಂಧೆಗಳಿಗೆ ಕಡಿವಾಣ ಹಾಕೋಣ ಎಂದು ಕಹಳೆ ಊದಿದರು

ಬೆಂಗಳೂರಿನ ಬಸವನ ಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಗುರುವಾರ ಆಪ್ ವತಿಯಿಂದ ರೈತ ಸಮಾವೇಶ ನಡೆಯಿತು.

ಈ ವೇಳೆ ಕೇಜ್ರಿವಾಲ್ ಅವರಿಗೆ ಕೋಡಿಹಳ್ಳಿ ಚಂದ್ರಶೇಖರ್ ಹಸಿರು ಶಾಲು ಹಾಕಿದರೆ ಕೆಲ ದಿನಗಳ ಹಿಂದೆ ಆಪ್ ಸೇರಿದ್ದ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೃಹತ್ ಹೂವಿನ ಹಾರವನ್ನು ಹಾಕಿ ಸನ್ಮಾನಿಸಿದರು.

ಕಾರ್ಯಕ್ರಮವನ್ನು ಕೇಜ್ರಿವಾಲ್ ಆವರು ವಿವಿಧ ಧಾನ್ಯಗಳು ಮತ್ತು ತರಕಾರಿಗಳ ರಾಶಿಗೆ ಪೂಜೆ ಮಾಡುವ ಮೂಲಕ ಬೃಹತ್ ರೈತ ಸಮಾವೇಶ ಉದ್ಘಾಟಿಸಿದರು.

ಭಾಷಣ ಪ್ರಾರಂಭ ಮಾಡುವುದಕ್ಕೂ ಮುನ್ನ ಕೇಜ್ರಿವಾಲ್, ನನಗೆ ಕನ್ನಡ ಬರಲ್ಲ ಕ್ಷಮಿಸಿ ಹಿಂದಿಯಲ್ಲಿ ಮಾತಾಡ್ತೀನಿ. ಎರಡು ದಿನಗಳಿಂದ ನನಗೆ ತೀವ್ರ ಹಲ್ಲು ನೋವು. ನಾನು ಪೇನ್ ಕಿಲ್ಲರ್ ಸೇವಿಸಿ ಇಲ್ಲಿಗೆ ಬಂದಿದ್ದೇನೆ. ಆಪ್ ಪಕ್ಷಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಎಂದು ಹೇಳಿ ನಂತರ ಭಾಷಣ ಮಾಡಲು ಪ್ರಾರಂಭ ಮಾಡಿದರು.

ಕರ್ನಾಟಕದಲ್ಲಿ ಆಪ್ ಅಧಿಕಾರಕ್ಕೆ ಬರಬೇಕು. ನಾವು ಇಲ್ಲಿ ಸರ್ಕಾರ ರಚನೆ ಮಾಡೋಣ. ಕಮೀಷನ್ ದಂಧೆಗಳಿಗೆ ಕಡಿವಾಣ ಹಾಕೋಣ ಎಂದು ಕರೆ ಕೊಟ್ಟರು.

ಇಡೀ ದೇಶದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಚೆನ್ನಾಗಿಲ್ಲ. ದೆಹಲಿಯಲ್ಲಿ ಮಾತ್ರ ಉತ್ತಮ ಸರ್ಕಾರಿ ಶಾಲೆಗಳಿವೆ. ಇಂಥ ಸರ್ಕಾರಿ ಶಾಲೆಗಳನ್ನು ಕರ್ನಾಟಕದಲ್ಲೂ ಮಾಡೋಣ. ದೆಹಲಿಯಲ್ಲಿ ಅತ್ಯುತ್ತಮ ಸರ್ಕಾರಿ ಆಸ್ಪತ್ರೆ ಸೇವೆಗಳನ್ನ ಕೊಡ್ತಿದ್ದೇವೆ. ಆಸ್ಪತ್ರೆಯಲ್ಲಿ ಹೈಟೆಕ್ ಸೇವೆ ಸಿಗ್ತಿದೆ. ವಿದ್ಯುತ್ ದೆಹಲಿಯಲ್ಲಿ ಉಚಿತ. ಸರ್ಕಾರಿ ಶಾಲೆ, ವಿದ್ಯುತ್, ಆರೋಗ್ಯ, ನೀರು, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ. ಇದು ಆಗಿದ್ದು ಒಂದು ಪ್ರಾಮಾಣಿಕ ರಾಜಕೀಯ ಪಕ್ಷ ಆಪ್ ನಿಂದ ಸಾಧ್ಯವಾಗಿದೆ ಎಂದು ಹೇಳಿದರು.

ಈ ವೇಳೆ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿಯೇ ನಿವೃತ್ತ ಕೆಎಎಸ್ ಅಧಿಕಾರ ಕೆ.ಮಥಾಯಿ ಆಪ್ ಪಕ್ಷವನ್ನು ಸೇರಿದರು.
ಇದೇ ವೇಳೆ  ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಆಮ್‌ ಆದ್ಮಿ ಪಾರ್ಟಿ ಸೇರಿದರು.

Share This Article
Leave a comment