ಪಿಓಪಿ ಗಣಪ ತ್ಯಜಿಸಿ, ಪರಿಸರ ಸ್ನೇಹಿ ಗಣಪನ ಪೂಜಿಸಿ: ಈಶ್ವರ ಖಂಡ್ರೆ

Team Newsnap
1 Min Read

ಬೆಂಗಳೂರು: ಜಲಚರಗಳ ಸಾವಿಗೆ ಕಾರಣವಾಗುವ, ಕೆರೆ, ಕಟ್ಟೆ, ಬಾವಿಯ ನೀರನ್ನು ಕಲುಷಿತಗೊಳಿಸುವ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸುವಂತೆ ಹಾಗೂ ಇತರರನ್ನೂ ಪರಿಸರ ಸ್ನೇಹಿ ಗಣಪನ ಪೂಜಿಸುವಂತೆ ಪ್ರೇರೇಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.

ಗಣಪತಿ ಪರಿಸರದಿಂದ ಉದ್ಭವಿಸಿದ ದೇವರು, ನಾವು ಪರಿಸರ ಸ್ನೇಹಿ ಗಣಪನ ಪೂಜಿಸಿದರೆ ಅದು ನಿಜ ಭಕ್ತಿಯ ಸಮರ್ಪಣೆ ಆಗುತ್ತದೆ ಎಂದು ತಿಳಿಸಿರುವ ಅವರು, ಜೇಡಿ ಮಣ್ಣಿನಿಂದ ಅಥವಾ ಗೋಮಯದಿಂದ ತಯಾರಿಸಿದ ಗಣಪತಿಯ ಮೂರ್ತಿಗಳನ್ನು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಗಿಡ, ಮರಗಳಿಗೆ ಹಾಕುವ ಮೂಕ ಪ್ರಕೃತಿ ಪರಿಸರ ಉಳಿಸುವಂತೆ ಮನವಿ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ನಾವು ಪರಿಸರಕ್ಕೆ ಮಾರಕವಾದಂತಹ ಬಣ್ಣ ಲೇಪಿತ ಹಾಗು ಪ್ಲಾಸ್ಟರ್ ಆಫ್ ಪ್ಯಾರಿಸ್ – ಪಿ.ಓ.ಪಿ.ಯಿಂದ ತಯಾರಿಸಿದ ಮೂರ್ತಿಗಳನ್ನು ಕೆರೆ, ಬಾವಿ, ನದಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ವಿಸರ್ಜಿಸುದಿಲ್ಲ ಎಂದು ಪ್ರತಿಜ್ಞೆ ಮಾಡೋಣ.

ನಮ್ಮ ಪರಿಸರವನ್ನು ಸಂರಕ್ಷಿಸೋಣ” ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡೊಣ ಎಂಬ ಸಂಕಲ್ಪ ಮಾಡೋಣ ಎಂದು ಮನವಿ ಮಾಡಿದರು.

Share This Article
Leave a comment