ಅಭಿ ಮದುವೆ ಬೆಂಗಳೂರಿನಲ್ಲಿ; ಬೀಗರ ಊಟ – ಮಂಡ್ಯ

Team Newsnap
1 Min Read
Abhi's marriage is in Bangalore; Beegara Oota - Mandya ಅಭಿ ಮದುವೆ ಬೆಂಗಳೂರಿನಲ್ಲಿ; ಬೀಗರ ಊಟ - ಮಂಡ್ಯ

ಅಭಿಷೇಕ್ ಅವರ ವಿವಾಹ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 5ನೇ ತಾರೀಖು ನಡೆಯಲಿದೆ. ಅಭಿಷೇಕ್ ಮತ್ತು ಅವಿವಾ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಜೂನ್ 7 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಜೂನ್ 17ಕ್ಕೆ ಮಂಡ್ಯದಲ್ಲಿ ಬೀಗರ ಊಟವನ್ನು ಏರ್ಪಡಿಸಿದ್ದಾರೆ.

ಮದುವೆ ಆರತಕ್ಷತೆ ಸಮಾರಂಭದಲ್ಲಿ ಸುಮಾರು 10 ಸಾವಿರ ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ. ಏಪ್ರಿಲ್ 5ರಂದು ಅಭಿಷೇಕ್ ಮತ್ತು ಸುಮಲತಾ ಅಂಬರೀಷ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ಪತ್ರ ನೀಡಿದ್ದಾರೆ. ಅಲ್ಲದೇ ಅನೇಕ ಗಣ್ಯರಿಗೂ ಆಹ್ವಾನ ನೀಡಿದ್ದಾರೆ.

ಅಭಿಷೇಕ್ ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಇನ್ನೂ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ನಕಲಿ : ಶೀಘ್ರದಲ್ಲೇ ಅಧೀಕೃತ ಪಟ್ಟಿ- ಕೆಪಿಸಿಸಿ

ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್‌ ಸ್ಟಾರ್, ಹಲವು ಪ್ರಮುಖ ತಾರೆಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

Share This Article
Leave a comment