ಅಭಿಷೇಕ್ ಅಂಬರೀಶ್ ಅದ್ಧೂರಿ ಅರಿಶಿನ ಶಾಸ್ತ್ರ

Team Newsnap
1 Min Read
Abhishek Ambarish Adhuri Arishina Shastra ಅಭಿಷೇಕ್ ಅಂಬರೀಶ್ ಅದ್ಧೂರಿ ಅರಿಶಿನ ಶಾಸ್ತ್ರ

ಅಭಿಷೇಕ್ ಅಂಬರೀಶ್- ಅವಿವ ಬಿಡಪ ಮದುವೆ ಅದ್ದೂರಿಯಾಗಿ ಜರುಗಲಿದೆ. ಅರಿಶಿನ ಶಾಸ್ತ್ರದ. ಸಂಭ್ರಮದಲ್ಲಿರುವ ನಟ ಅಭಿಷೇಕ್ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಜೂನ್ 7ರಂದು ಆರತಕ್ಷತೆ ಸಮಾರಂಭ ನಡೆಯಲಿದೆ. ಅಭಿಷೇಕ್- ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. 11 ಡಿಸೆಂಬರ್ 2022ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು.

ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ ( 9:30-10:30 ) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಜರುಗಲಿದೆ.ಜಿಪಂ – ತಾಪಂಗೆ ಚುನಾವಣೆ : ಸಚಿವ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಮಿತಿ

ಸಿನಿಮಾ ರಾಜಕೀಯ ಎರಡೂ ಕ್ಷೇತ್ರದ ಗಣ್ಯರು ಅಭಿಷೇಕ್- ಅವಿವ ಆರತಕ್ಷತೆಗೆ ಬರಲಿದ್ದಾರೆ. ಮದುವೆಗೆ ಆಪ್ತ ಬಳಗದವರಿಗಷ್ಟೇ ಆಹ್ವಾನ ನೀಡಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಹೊಸ ಬಾಳಿಗೆ ಕಾಲಿಡುತ್ತಿರುವ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

Share This Article
Leave a comment