January 30, 2026

Newsnap Kannada

The World at your finger tips!

abishek

ಜನ ಇಷ್ಟಪಟ್ಟರೆ ಚುನಾವಣೆಗೆ ಸ್ಪರ್ಧೆ- ಅಭಿಷೇಕ್ ಅಂಬರೀಶ್

Spread the love

ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ನಟ ಅಭಿಷೇಕ್ ಅಂಬರೀಶ್ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳಿಗೆ ಫುಡ್‍ಕಿಟ್ ವಿತರಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅಭಿಷೇಕ್ ಅಂಬರೀಶ್, ಮುಂದೆ ರಾಜಕೀಯ ಪ್ರವೇಶ ಮಾಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿ, ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು.

ಜನ ಬಯಸಿದರೆ ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಮದ್ದೂರಿಗಾಗಲಿ, ಮಂಡ್ಯಗಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಒಳ್ಳೆಯ ಎಂಎಲ್‍ಎಗಳು ಸಿಗಬೇಕು. ಒಳ್ಳೆಯ ಜನಪ್ರತಿನಿಧಿಗಳು ಸಿಗಬೇಕು ಯಾರ ಮನೆಯವರು ನನಗೆ ಬೇಕಾದವರು ಅಂತಲ್ಲ ಎಂದರು. ಈ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆಯನ್ನು ಅಭಿಷೇಕ್ ನೀಡಿದ್ದಾರೆ. 

error: Content is protected !!