ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಭಿಷೇಕ್ ಬಚ್ಚನ್ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ, ಬಾಲಿವುಡ್ ಬಿಗ್ ಬಿ ಪುತ್ರನ ಬಲಗೈ ಮತ್ತು ಬೆರಳುಗಳಿಗೆ ಗಾಯಗಳಾಗಿವೆ. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.
ಗಾಬರಿಯಾಗುವ ಅಗತ್ಯವಿಲ್ಲವೆಂದೂ ಹೇಳಿದ್ದಾರೆ. ಕೆಲ ದಿನಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ನಟ ಅಮಿತಾಬ್ ಬಚ್ಚನ್ ಪುತ್ರಿ ಶ್ವೇತಾ ನಂದಾರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಮಗನ ಆರೋಗ್ಯ ವಿಚಾರಿಸಿದರು.
ಅಭಿಷೇಕ್ ಪತ್ನಿ ಐಶ್ವರ್ಯಾರೈ ಬಚ್ಚನ್ ಮಣಿರತ್ನಂ ಚಿತ್ರದ ಚಿತ್ರೀಕರಣಕ್ಕೆಂದು ಮಧ್ಯಪ್ರದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
ಹಿಂದಿಗೆ ರಿಮೇಕ್ ಆಗುತ್ತಿರುವ ತಮಿಳಿನ ಓಟು ಸೇರಪ್ಪು ಸೈಜ್ 7 ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವೇಳೆ ಅಭಿಷೇಕ್ ಬಚ್ಚನ್ ಗಾಯಗೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್