ಆರ್ಟಿಕಲ್ 370 ರದ್ದು ಮಾಡಿದ ಸರ್ಕಾರಕ್ಕೆ ಸುಪ್ರೀಂ ಸಾತ್

Team Newsnap
1 Min Read

ನವದೆಹಲಿ : ಸುಪ್ರೀಂ ಕೋರ್ಟ್‌ , ಜಮ್ಮು ಮತ್ತು ಕಾಶ್ಮೀರದಲ್ಲಿನ ಆರ್ಟಿಕಲ್ 370 (Article 370) ರದ್ದು ಮಾಡಿದ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದ್ದು , ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ವಜಾ ಮಾಡಿದೆ .

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನೆಲೆ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಿದೆ.

WhatsApp Image 2022 11 09 at 10.27.36 AM

ಇದನ್ನು ಓದಿ –ರೀಲ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್ ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು.

Share This Article
Leave a comment