ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ, ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ, ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ, ರಾಜ್ಯ ಸರ್ಕಾರ ಹೊಸ ಶಿಕ್ಷಣ ಪಾಲಿಸಿ ತರಲು ಸಮಿತಿ ರಚನೆ ಮಾಡಲಿದೆ ಎಂದು ಹೇಳಿದರು.
NEP ಸಾಧಕ-ಬಾಧಕದ ಬಗ್ಗೆ ಚರ್ಚೆ ಆಗಿದೆ. ನಮ್ಮ ಶಿಕ್ಷಣ ರಾಷ್ಟ್ರದಲ್ಲಿ ಉತ್ತಮವಾಗಿದೆ. ಅನೇಕ ಸಮಸ್ಯೆಗಳನ್ನ ಕುಲಪತಿಗಳು ಹೇಳಿದ್ದಾರೆ,ನಮ್ಮ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. NEPಯನ್ನ ತರಾತುರಿಯಲ್ಲಿ ಕರ್ನಾಟಕದಲ್ಲಿ ಜಾರಿ ಮಾಡಲಾಯ್ತು. ಪ್ರಾಥಮಿಕ ಶಿಕ್ಷಣದಿಂದ ಪ್ರಾರಂಭ ಮಾಡಬೇಕಿತ್ತು. ಆದರೆ ಆತುರವಾಗಿ ಜಾರಿ ಮಾಡಿದ್ದಾರೆ.
NEP ಯಲ್ಲಿ ನಮಗೆ ಅನೇಕ ವಿಚಾರದಲ್ಲಿ ಒಪ್ಪಿಗೆ ಇಲ್ಲ. ತಂತ್ರಜ್ಞಾನಕ್ಕೆ ತಕ್ಕಂತೆ ಎಜುಕೇಷನ್ ಇರಬೇಕು. ಇದಕ್ಕೆ ತಕ್ಕಂತೆ ಪಾಲಿಸಿ ರೂಪಿಸುತ್ತೇವೆ ಎಂದರು.ಒಂದು ವಾರದಲ್ಲಿ ಸಮಿತಿ ರಚನೆ ಮಾಡ್ತೀವಿ. ಆದಷ್ಟು ಬೇಗ ಸಮಿತಿ ವರದಿ ತೆಗೆದುಕೊಂಡು ಹೊಸ ಶಿಕ್ಷಣ ನೀತಿ ಜಾರಿ ಮಾಡ್ತೀವಿ. ಎಸ್‌ಇಪಿ ಜಾರಿ ಮಾಡ್ತೀವಿ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಅಳವಡಿಸಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿಯ ವಿವಿಧ ಅಂಶಗಳನ್ನು ನಾವು ಪರಿಶೀಲಿಸಿದ್ದೇವೆ ಮತ್ತು ಅದನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ. ಮುಂದಿನ ವರ್ಷ ಹೊಸ ಕರ್ನಾಟಕ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ