ಹಾಲಿನ ಡೈರಿಯ ಚುನಾವಣೆಗಾಗಿ ಚುನಾವಣಾಧಿಕಾರಿ ನೇಮಕಕ್ಕೆ ಲಂಚ ಪಡೆಯುತ್ತಿದ್ದ ಸಹಕಾರ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಶಿವಾನಂದ ಎಂಬುವರನ್ನು ಎಸಿಬಿ ಅಧಿಕಾರಿಗಳು ಗುರುವಾರ ಬಂಧಿಸಿದರು.
ಕನಕಪುರ ತಾಲ್ಲೂಕಿನ ಅರೇಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಹಾಗೂ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಿಸುವಂತೆ ಕೋರಿ ಡೇರಿಯ ಸಿಇಒ ಗೀತಾ ಇಲಾಖೆಗೆ ಮನವಿ ಸಲ್ಲಿಸಿದ್ದರು.ಈ ಕೆಲಸ ಮಾಡಿಕೊಡಲು ಆರೋಪಿ ಶಿವಾನಂದ 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನು ಓದಿ : ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್‍ಗೆ ಬಂಧನ: ಜೈಲು
ಗೀತಾ ಈ ಸಂಬಂಧ ಎಸಿಬಿಗೆ ದೂರು ನೀಡಿದ್ದರು. ಗುರುವಾರ ಮಧ್ಯಾಹ್ನ ರಾಮನಗರದ ಸಹಾಯಕ ನಿಬಂಧಕರ ಕಚೇರಿಯಲ್ಲಿ ಆರೋಪಿಯು ಮಾಗಡಿಯ ಕೃಷಿ ಪತ್ತಿನ ಸಹಕಾರ ಸಂಘವೊಂದರ ಕಾರ್ಯದರ್ಶಿ ಚಂದ್ರಶೇಖರ್ ಎಂಬುವರ ಮೂಲಕ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು