December 25, 2024

Newsnap Kannada

The World at your finger tips!

politics,banglore,DC

ACB attack on DC office in Bangalore; DC close associate trap if accepting bribe of 5 lakhs

ಬೆಂಗಳೂರು ಡಿಸಿ ಕಚೇರಿ ಮೇಲೆ ACB ದಾಳಿ; DC ಆಪ್ತ ಸಹಾಯಕ 5 ಲಕ್ಷ ರು ಲಂಚ ಸ್ವೀಕಾರ ವೇಳೆ ಬಲೆಗೆ

Spread the love

ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ 5 ಲಕ್ಷ ರು ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ, ಉಪ ತಹಶೀಲ್ದಾರ್ ಸಿಕ್ಕಿ ಬಿದ್ದಿದ್ದಾರೆ.

ಇದನ್ನು ಓದಿ –ಮುತಾಲಿಕ್ , ಋಷಿಸ್ವಾಮೀಜಿಗೆ ನಿರ್ಬಂಧಕ್ಕೆ ಒತ್ತಾಯಿಸಿ ಶ್ರೀರಂಗಪಟ್ಟದಲ್ಲಿ ಬೃಹತ್ ಪ್ರತಿಭಟನೆ

ಸರ್ಜಾಪುರ ಬಳಿ ಭೂ ಪರಿವರ್ತನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಮಹೇಶ್ 15 ಲಕ್ಷ ರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಇಂದು 5 ಲಕ್ಷ ರು ಲಂಚ ಸ್ವೀಕಾರ ಎಸಿಬಿ ಅಧಿಕಾರಿಗಳಿಗೆ ದೂರುದಾರರು ದೂರು ನೀಡಿದ್ದರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ 6 ಜನ ಎಸಿಬಿ ಅಧಿಕಾರಿಗಳು ಮಹೇಶ್ ಎಂಬಾತನನ್ನು ಬಂಧಿಸಿದ್ದಾರೆ. ದಾಳಿ ವೇಳೆ ಕಚೇರಿಯಲ್ಲಿ ಡಿಸಿ ಜೆ. ಮಂಜುನಾಥ್ ಕೂಡ ಇದ್ದರು. ಜಿಲ್ಲಾಧಿಕಾರಿ ಕಚೇರಿ ಬಾಗಿಲು ಮುಚ್ಚಿ ಎಸಿಬಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ದಾಖಲೆಗಳ ಪರಿಶೀಲನೆ ನಡೆದಿದೆ.

Copyright © All rights reserved Newsnap | Newsever by AF themes.
error: Content is protected !!