ರಾಜ್ಯಾದ್ಯಂತ ಏಕ ಕಾಲಕ್ಕೆ 21 ಅಧಿಕಾರಿಗಳ ನಿವಾಸದ ಮೇಲೆ 300 ಎಸಿಬಿ ಅಧಿಕಾರಿಗಳು ದಾಳಿ

Team Newsnap
2 Min Read

ರಾಜ್ಯಾದ್ಯಂತ 80 ಕಡೆ ಎಸಿಬಿ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಏಕಕಾಲಕ್ಕೆ 21 ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧಕಾರ್ಯ ಮಾಡುತ್ತಿದ್ದಾರೆ.

ಬೆಳಗ್ಗೆ 5 ಗಂಟೆ ವೇಳೆಗೆ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಂಗಳೂರಿನ ಜೆಪಿ ನಗರದ ಶಿವಲಿಂಗಯ್ಯ ಎಂಬುವವರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿಯಾಗಿದೆ.
ಬಿಡಿಎ ಅಧಿಕಾರಿ ಆಗಿರುವ ಶಿವಲಿಂಗಯ್ಯ ಜೆಪಿನಗರ, ದೊಡ್ಡಕಲ್ಲಸಂದ್ರ, ಹಾಗೂ ಬಸವನಗುಡಿಗಳಲ್ಲಿ ಮನೆಯನ್ನು ಹೊಂದಿದ್ದಾರೆ. ಅಕ್ರಮ ಆಸ್ತಿಗಳಿಕೆ ಹಿನ್ನೆಲೆಯಲ್ಲಿ ದಾಳಿಯಾಗಿದೆ.

ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ಮಾಡಿದೆ. ಬೆಂಗಳೂರಿನ ಜೆಪಿ ನಗರ, ಬಸವನಗುಡಿ, ಚಂದ್ರಾಲೇಔಟ್ ಹಾಗೂ ದೊಡ್ಡಕಲ್ಲಸಂದ್ರದಲ್ಲಿ ದಾಳಿ ನಡೆದಿದೆ.

ಇದನ್ನು ಓದಿ – ರಾಷ್ಟ್ರಪತಿ ಚುನಾವಣೆ – 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಎಸಿಬಿ ದಾಳಿ ಮಾಡಿದ ಅಧಿಕಾರಿಗಳ ವಿವರ

ಭೀಮಾ ರಾವ್ ವೈ ಪವಾರ್ (ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್, ಬೆಳಗಾವಿ)

ಹರೀಶ್ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ಉಡುಪಿ)

ರಾಮಕೃಷ್ಣ ಎಚ್ .ವಿ. (ಎಇಇ, ಸಣ್ಣ ನೀರಾವರಿ, ಹಾಸನ)

ರಾಜೀವ್ ಪುರಸಯ್ಯ ನಾಯಕ್ (ಸಹಾಯಕ ಇಂಜಿನಿಯರ್, ಪಿಡಬ್ಲ್ಯುಡಿ ಇಲಾಖೆ, ಕಾರವಾರ)

ಬಿ ಆರ್ ಬೋಪಯ್ಯ (ಜೂನಿಯರ್ ಇಂಜಿನಿಯರ್, ಪೊನ್ನಂಪೇಟೆ ಜಿಲ್ಲಾ ಪಂಚಾಯತ್)

ಮಧುಸೂಧನ್ (ಜಿಲ್ಲಾ ನೋಂದಣಾಧಿಕಾರಿ, IGR ಕಚೇರಿ, ಬೆಳಗಾವಿ)

ಪರಮೇಶ್ವರಪ್ಪ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ, ಹೂವಿನಹಡಗಲಿ)

ಯೆಲ್ಲಪ್ಪ ಎನ್ ಪಡಸಾಲಿ (RTO, ಬಾಗಲಕೋಟೆ)

ಶಂಕರಪ್ಪ ನಾಗಪ್ಪ ಗೋಗಿ ( ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ)

ಪ್ರದೀಪ್ ಎಸ್ ಆಲೂರ್ ( ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ, RDPR, ಗದಗ)

ಸಿದ್ದಪ್ಪ ಟಿ. (ಉಪ ಮುಖ್ಯ ವಿದ್ಯುತ್ ಅಧಿಕಾರಿ, ಬೆಂಗಳೂರು)

ತಿಪ್ಪಣ್ಣ ಪಿ ಸಿರಸಗಿ ( ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀದರ್)

ಮೃತುಂಜಯ ಚೆನ್ನಬಸಯ್ಯ ತಿರಾಣಿ ( ಸಹಾಯಕ ಕಂಟ್ರೋಲರ್, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್)

ಮೋಹನ್ ಕುಮಾರ್ (ಕಾರ್ಯನಿರ್ವಾಹಕ ಇಂಜಿನಿಯರ್, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ)

ಶ್ರೀಧರ್ (ಜಿಲ್ಲಾ ನೋಂದಣಾಧಿಕಾರಿ, ಕಾರವಾರ)

ಮಂಜುನಾಥ್ ಜಿ (ನಿವೃತ್ತ ಇಇ. PWD)

ಶಿವಲಿಂಗಯ್ಯ (ಸಿ ಗ್ರೂಪ್​, ಬಿಡಿಎ)

ಉದಯ ರವಿ ( ಪೊಲೀಸ್ ಇನ್ಸ್‌ಪೆಕ್ಟರ್, ಕೊಪ್ಪಳ)

ಬಿ. ಜಿ.ತಿಮ್ಮಯ್ಯ ( ಕೇಸ್ ವರ್ಕರ್, ಕಡೂರು ಪುರಸಭೆ)

ಚಂದ್ರಪ್ಪ ಸಿ ಹೋಳೇಕರ್ (UTP ಕಚೇರಿ, ರಾಣೆಬೆನ್ನೂರು)

ಜನಾರ್ದನ್ (ನಿವೃತ್ತ ರಿಜಿಸ್ಟ್ರಾರ್ ಮೌಲ್ಯಮಾಪನಗಳು (ಭೂಮಿ), ಬೆಂಗಳೂರು)

Share This Article
Leave a comment