ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ACB ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸರ್ಚ್ ವಾರೆಂಟ್ ಪಡೆದುಕೊಂಡೇ ಜಮೀರ್ ಗೆ ಸೇರಿದ 5 ಮನೆ ಹಾಗೂ ಕಚೇರಿಯ ಮೇಲೆ 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ದಾಳಿ ಎಲ್ಲಿ ನಡೆಡೆದಿದೆ? :
- ಫ್ರೆಜರ್ ಟೌನ್ನಲ್ಲಿರುವ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ
- ಸಿಲ್ವರ್ ಓಕ್ ಅಪಾರ್ಟ್ಮೆಂಟ್ ಮೇಲೆ ದಾಳಿ
- ಸದಾಶಿವ ನಗರದ ಗೆಸ್ಟ್ ಹೌಸ್ ಮೇಲೆ ದಾಳಿ
- ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ ದಾಳಿ
- ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಮೇಲೆ ದಾಳಿ
ಕಳೆದ ಆಗಸ್ಟ್ನಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿ ಮತ್ತು ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದರು. ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು.
ಕಾಳಿ ಮಾತೆ ಬಾಯಲ್ಲಿ ಸಿಗರೇಟ್ ಕ್ಷಮೆ ಕೇಳದ ನಿರ್ದೇಶಕಿ ಲೀನಾ
ಜಮೀರ್ ಕಳೆದ ಹಣಕಾಸು ವರ್ಷದಲ್ಲಿ ಘೋಷಿಸಿಕೊಂಡ ಆಸ್ತಿಗಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿತ್ತು. ಈಗ ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತು ಹಾಗೂ ಆಸ್ತಿ ಹುಡುಕಾಟದಲ್ಲಿ ತೊಡಗಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ