ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 9 ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ, ಮಂಗಳೂರು, ದಾವಣಗೆರೆ, ಉಡುಪಿ,ಕೋಲಾರ,ಚಿತ್ರದುರ್ಗ, ಬಳ್ಳಾರಿ ಈ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ನಗರ ಸಭೆಯ ಯೋಜನಾ ನಿರ್ದೇಶಕ ಹೆಚ್.ಆರ್.ಕೃಷ್ಣಪ್ಪ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಖಲೆ ಹಾಗೂ ಆಸ್ತಿಪತ್ರಗಳನ್ನ ಪರಿಶೀಲನೆ ಮಾಡ್ತಿದ್ದಾರೆ.
ಇವರ ಸ್ವ-ಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ, ಮಾಲೂರು ಮನೆ, ಬೆಂಗಳೂರಿನ ವಿಜಯನಗರದಲ್ಲಿರುವ ಮನೆ ಮತ್ತು ಕಚೇರಿ ಐದು ಕಡೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ್ ನೇತ್ರತ್ವದ ತಂಡದಿಂದ ದಾಳಿ ನಡೆದಿದೆ.
ಯಾವ ಅಧಿಕಾರಿಗಳ ನಿವಾಸದ ಮೇಲೆ ದಾಳಿ:
- ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ
- ಕೃಷ್ಣ.ಎಸ್ -ಹೆಬ್ಸೂರು ಇಇ,
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ-ಉಡುಪಿ - ಆರ್.ಪಿ.ಕುಲಕರ್ಣಿ -ಸಿಇ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್-ಬೆಂಗಳೂರು
- ಹೆಚ್.ಆರ್.ಕೃಷ್ಣಪ್ಪ -ಸಹಾಯಕ ನಿರ್ದೇಶಕ- ಮಾಲೂರು ನಗರ ನಗರ ಯೋಜನಾ ಪ್ರಾಧಿಕಾರ, ಕೋಲಾರ
- ಸುರೇಶ್ ಮೋಹ್ರೆ -JE PRE ಬೀದರ್
- ವೆಂಕಟೇಶ್ ಟಿ -DCF ಸಾಮಾಜಿಕ ಅರಣ್ಯ-ಮಂಡ್ಯ
- ಎ.ಕೃಷ್ಣಮೂರ್ತಿ -ಹಿರಿಯ ಮೋಟಾರು ವಾಹನ ನಿರೀಕ್ಷಕರು-ಕೋರಮಂಗಲ
- ಸಿದ್ದರಾಮ ಮಲ್ಲಿಕಾರ್ಜುನ್ -AEE ಹೆಸ್ಕಾಂ ವಿಜಯಪುರ
- ಎ.ಎನ್.ವಿಜಯ್ ಕುಮಾರ್ -ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್-ಬಳ್ಳಾರಿ
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!