ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿ ಯಾಗಿ ಕೆಲಸ ಮಾಡುತ್ತಿದ್ದ ವೇಳೆ ಲಂಚ ಪಡೆದಿದ್ದರು ಎಂಬ ಆರೋಪದಲ್ಲಿ ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆ ಮೇಲೆ ನ. 7ರಂದು ಎಸಿಬಿ ದಾಳಿ ನಡೆಸಲಾಗಿತ್ತು.
ಇದೀಗ ಮತ್ತೊಮ್ಮೆ ಅವರಿಗೆ ಎಸಿಬಿ ಶಾಕ್ ನೀಡಿದೆ. ಇಂದು ಬೆಳ್ಳಂಬೆಳಗ್ಗೆ ಡಾ. ಸುಧಾ ಸಂಬಂಧಿಕರು ಮತ್ತು ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ.
ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ ನಡೆಸಲಾಗಿದೆ, ಮತ್ತಷ್ಟು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಕೆಎಎಸ್ ಅಧಿಕಾರಿ ಡಾ. ಸುಧಾ ಸ್ನೇಹಿತರು, ಸಂಬಂಧಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿ ಶೋಧ ನಡೆಸಿದೆ. ಬೆಂಗಳೂರಿನ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆ ಸುಧಾ ಅವರ ಮನೆ, ಅವರ ಆಪ್ತೆ ರೇಣುಕಾ ಮನೆ ಸೇರಿದಂತೆ 6 ಕಡೆಗಳಲ್ಲಿ ದಾಳಿ ನಡೆಸಿದ್ದ ವೇಳೆ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನೂರಾರು ಕೋಟಿ ಆಸ್ತಿ ಪತ್ರಗಳು ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ಎಸಿಬಿಯಿಂದ ಇಂದು ಮತ್ತೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಎಸಿಬಿ ದಾಳಿ ಎಲ್ಲೆಲ್ಲಿ?
ಬೆಂಗಳೂರು ನಗರ ಮತ್ತು ನಗರದ ಹೊರವಲಯಲ್ಲಿ ದಾಳಿ ನಡೆಸಲಾಗಿದೆ, ಕೆಂಗೇರಿಯ ದೊಡ್ಡಾಲದ ಮರ ಮತ್ತು ನಗರದ ವಿವಿಧ ಭಾಗಗಳಲ್ಲಿ ದಾಳಿ ನಡೆಸಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಪ್ರಭು ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಭೀಮನ ಕುಪ್ಪೆಯ ಪ್ರಭು ಅವರ ಮನೆಯಲ್ಲಿನ ಕಾಗದ ಪತ್ರಗಳನ್ನು ಮುಂದಿಟ್ಟು ಪರಿಶೀಲನೆ ನಡೆಸಲಾಗಿದೆ. ದಾಖಲೆ ಪತ್ರಗಳನ್ನು ಮುಂದಿಟ್ಟುಕೊಂಡು ಪ್ರಭು ಅವರಿಂದ ಮಾಹಿತಿ ಪಡೆಯಲಾಗುತ್ತಿದೆ. ಬೆಂಗಳೂರಿನ ಮಲ್ಲತ್ತಹಳ್ಳಿ , ಐಟಿಐ ಲೇಔಟ್, ರಾಮೋಹಳ್ಳಿ, ಭೀಮನಕುಪ್ಪೆಯಲ್ಲಿ ದಾಳಿ ನಡೆಸಲಾಗಿದೆ.
6 ಕಡೆ ದಾಳಿ- ಏಜೆಂಟ್ ಮನೆಯೂ ಸೇರಿ
ನಗರದಲ್ಲಿ ಒಟ್ಟು ಆರು ಕಡೆ ದಾಳಿ ನಡೆಸಲಾಗಿದ್ದು, ಭೀಮನಕುಪ್ಪೆಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಇಂದು ಬೆಳಗ್ಗೆ 6.30ಕ್ಕೆ ರಿಯಲ್ ಎಸ್ಟೇಟ್ ಏಜೆಂಟ್ ಮಹೇಶ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಭೀಮನಕುಪ್ಪೆಯ ನಿವಾಸದಲ್ಲಿ ಇರುವ ಮಹೇಶ್ ಅವರ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅದೇ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭು ಮನೆ ಮೇಲೂ ದಾಳಿ ನಡೆಸಲಾಗಿದೆ. ಭೀಮನಕುಪ್ಪೆಯಲ್ಲಿ ಮೂರು ಕಡೆ, ಎನ್ ಜಿಎಫ್ ಲೇಔಟ್, ರಾಮಸಂದ್ರ, ಕೆಕೆ ಲೇಔಟ್ ನಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಹಿಂದೆ ಸೊರಬದಲ್ಲಿ ತಹಸೀಲ್ದಾರ್ ಆಗಿದ್ದ ಡಾ. ಸುಧಾ ಶಿವಮೊಗ್ಗದಲ್ಲೇ ಬೇರೆ ಬೇರೆ ತಾಲೂಕಿನಲ್ಲಿ ತಹಸೀಲ್ದಾರ್ ಆಗಿ ಹೆಚ್ಚು ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಿಡಿಎಯಲ್ಲಿ ಮೊದಲು ಡೆಪ್ಯೂಟಿ ಸೆಕ್ರೆಟರಿ ಆಗಿದ್ದು, ನಂತರ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಸದ್ಯ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿದ್ದಾರೆ.
ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ