ಬೆಂಗಳೂರಿನ ಬಿಡಿಎ ಭೂ ಸ್ವಾಧೀನ ವಿಭಾಗ, ಕಾರ್ಯದರ್ಶಿಗಳ ಕಚೇರಿಗಳ ಮೇಲೆ ನಿನ್ನೆ ನಡೆದ ಎಸಿಬಿ
ದಾಳಿಯಲ್ಲಿ ಭಾರಿ ಪ್ರಮಾಣದ ನೋಟು ಕಂತೆಗಳು ಸಿಕ್ಕಿವೆ
ಡಿಎಸ್ 1,2,3,4 ಕಚೇರಿಗಳು ಹಾಗೂ ಅವರ ಅಪ್ತರ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಭೂ ಸ್ವಾಧೀನ ವಿಭಾಗದಲ್ಲಿ ಸ್ವಾಧೀನ ಜಾಗಕ್ಕೆ ಪರಿಹಾರ ಸೈಟ್ ನೀಡುವಲ್ಲಿ ಅಕ್ರಮ, ಪರಿಹಾರದ ಹಣ ನೀಡುವಲ್ಲಿ ಅಕ್ರಮ ದೂರುಗಳು ಕೇಳಿ ಬಂದಿದ್ದವು.
ದಾಳಿ ವೇಳೆ ಬಿಡಿಎ ಡೆಪ್ಯುಟಿ ಸೆಕ್ರೆಟರಿ ನವೀನ್ ಜೋಸೆಫ್ ಕಚೇರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಹಣವನ್ನು ವಶಕ್ಕೆ ಪಡೆದು ಪರಿಶೀಲನೆ ಮುಂದುವರಿಸಲಾಗಿದೆ.
ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದಾರೆ ಏಕಕಾಲಕ್ಕೆ 60ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ನೇತೃತ್ವದಲ್ಲಿ ಖುದ್ದು ಮೂವರು ಎಸ್‌ಪಿಗಳು ಬಿಡಿಎ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.
ಕಚೇರಿಯಲ್ಲಿದ್ದ ಎಂಟು ಅಧಿಕಾರಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಪಾರ್ಕಿಂಗ್‍ನಲ್ಲಿರುವ ವಾಹನಗಳು ಹಾಗೂ ಹೊರಗಿದ್ದವರನ್ನೂ ಪರಿಶೀಲನೆ ನಡೆಸಲಾಗಿದೆ.
ಫಾರ್ಚೂನರ್ ಕಾರ್‌ವೊಂದರಲ್ಲಿ ಬ್ಯಾಗ್‌ಗಟ್ಟಲೆ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಸದ್ಯ ಕಾರು ಮತ್ತು ಚಾಲಕನನ್ನು ಅಧಿಕಾರಿಗಳು ವಶಕ್ಕೆ ಪಡೆದರು. ನಂತರ ಸಂಬಂಧಪಟ್ಟ ಮಾಲೀಕನಿಗೆ ಫೋನ್ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಪರಿಶೀಲನೆ ನಡೆಸಲಾಯಿತು.
ಕಾರಿನಲ್ಲಿ ಸೀಲ್‌ಗಳು ಪತ್ತೆಯಾಗಿದ್ದು, ಎಸಿಬಿ ತಂಡ ಪರಿಶೀಲನೆ ನಡೆಸಿತು. ಇದೇ ವೇಳೆ ಕಚೇರಿಯ ಹೊರಗೆ ಹಾಗೂ ಒಳಗಡೆ ಇದ್ದ ಸಾರ್ವಜನಿಕರನ್ನೂ ಪರಿಶೀಲನೆಗೆ ಒಳಪಡಿಸಲಾಯಿತು.
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
More Stories
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
ರಾಜ್ಯಗಳಾದ್ಯಂತ `ED’ ದಾಳಿ: ಲಾಟರಿ ಕಿಂಗ್ ಮಾರ್ಟಿನ್ನ 12.41 ಕೋಟಿ ನಗದು ಜಪ್ತಿ