ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ತಡೆ

Team Newsnap
1 Min Read
ACB : The Supreme Court stayed the allegations made by Sandesh ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ತಡೆ #Thenewsnap #latestnews #ACB #Supreme_court #Kannada_news #Bengaluru #Mysuru #NEWS #india

ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಚ್.ಪಿ.ಸಂದೇಶ್ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಸೋಮವಾರ ಸುಪ್ರೀಂಕೋರ್ಟ್ ತಡೆ ನೀಡಿದೆ.

ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಮಾಜಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿತು.ಇದನ್ನು ಓದಿ –ಪ್ರೇಮಿಗಳ ಖಾಸಗಿ ವಿಡಿಯೋ ಸೆರೆ ಹಿಡಿದು 25 ಲಕ್ಷಕ್ಕೆ ಬೇಡಿಕೆ – ಉಷಾ , ಬಾಬು ಬಂಧನ

ಈ ವಿಚಾರಣೆ ವೇಳೆ ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.

ಜಾಮೀನು ಅರ್ಜಿ ಪ್ರಕರಣವೊಂದರ ವಿಚಾರಣೆ ಮಾಡುತ್ತಿದ್ದ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಎಸಿಬಿ ವಿರುದ್ಧ ಖಾರವಾಗಿ ಟೀಕೆ ಮಾಡಿದ್ದರು. ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೀಮಂತ್ ಕುಮಾರ್ ಸಿಂಗ್ ಬಳಿ ತಮ್ಮ ಸರ್ಕಾರಿ ಸೇವೆಗಳ ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಇದಕ್ಕೂ ತಡೆ ನೀಡಿದೆ.

Share This Article
Leave a comment