ಕಾಮಗಾರಿ ಮಾಡಿದ್ದ ಗುತ್ತಿಗೆದಾರನಿಗೆ ಬಿಲ್ ಪಾಸ್ ಮಾಡಲು 60 ಸಾವಿರ ರು ಲಂಚ ಪಡೆಯುತ್ತಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಟೆಕ್ನಿಕಲ್ ಎಂಜನೀಯರ್ ಸಿದ್ದನಾಯ್ಕ್ ಎಸಿಬಿ ಬಲೆಗೆ ಸಿಕ್ಕಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಿಂದ ಬೆಳಗಾವಿ ನಗರದಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿಯ ಬಿಲ್ ಪಾಸ್ ಮಾಡಲು ಶೇ.0.5ರಷ್ಟು ಅಂದರೆ, 60 ಸಾವಿರ ರು ಲಂಚ ಕೇಳಿದ್ದರು.
60 ಸಾವಿರ ರುಗಳನ್ನು ತಮ್ಮ ಮನೆಯಲ್ಲಿ ಸ್ವೀಕರಿಸುತ್ತಿದ್ದಾಗ ಗುರುವಾರ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಪೂರ್ವ ಕಂಪನಿ ಮ್ಯಾನೇಜರ್ ಬೆಳಗಾವಿ ಗಣೇಶ ನಗರದ ಸಂಜೀವ ಕುಮಾರ ನವಲಗುಂದ ದೂರು ಸಲ್ಲಿಸಿದ್ದರು.
ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಸಿಟಿ ಬಸ್ ನಿಲ್ದಾಣ ನಿರ್ಮಾಣ ಮಾಡುತ್ತಿದ್ದಾರೆ. ಇದರ ಬಿಲ್ ಅನುಮೋದನೆಗೆ ಸಿದ್ದನಾಯ್ಕ್ ಲಂಚ ಕೇಳಿದ್ದರು.
ಸಿದ್ದನಾಯ್ಕ್ ಮನೆಯನ್ನು ಶೋಧ ನಡೆಸಿದಾಗ 23.56 ಲಕ್ಷ ರೂ. ಪತ್ತೆಯಾಗಿದೆ.ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.
ಎದಿಬಿಎಸ್ಪಿ ಬಿಎಸ್ ನ್ಯಾಮಗೌಡ, ಮಾರ್ಗದರ್ಶನದಲ್ಲಿ ಜೆ.ಎಮ್.ಕರುಣಾಕರ ಶೆಟ್ಟಿ ಪೊಲೀಸ್ ಉಪಾಧೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎ.ಎಸ್ ಗುದಿಗೊಪ್ಪ, ಇನ್ಸ್ ಪೆಕ್ಟರ್, ಹಾಗೂ ಹೆಚ್ ಸುನೀಲ್ ಕುಮಾರ, ಪೊಲೀಸ್ ಇನ್ಸ್‌ಪೆಕ್ಟರ್, ಮತ್ತು ಬೆಳಗಾವಿ ಎಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
- 2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
- KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
- 1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
More Stories
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ