ಲಂಚ ಸ್ವೀಕರಿಸುವಾಗ ಶೆಟ್ಟಹಳ್ಳಿ ಗ್ರಾ.ಪಂ. ಅಧ್ಯಕ್ಷೆಯ ಪತಿ ಶಂಕರ್ ಮತ್ತು ಉಪಾಧ್ಯಕ್ಷ ಮನೋಹರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶೆಟ್ಟಹಳ್ಳಿ ಗ್ರಾಮದ ಶಾಲಾ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಿರುವ ಬಗ್ಗೆ ವಿವಾದ ಬಗೆಹರಿಸಲು ಇವರಿಬ್ಬರೂನ 10 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಎಂ.ಪಿ. ಶಂಕರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಇದನ್ನು ಓದಿ –ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ – ಇಬ್ಬರು ಕಾರ್ಮಿಕರ ದುರ್ಮರಣ
ಇಂದು ಮಧ್ಯಾಹ್ನ 3.30ಕ್ಕೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದ ಡಿವೈಎಸ್ಪಿ ಸುನೀಲ್ ಕುಮಾರ್, ಇನ್‌ಸ್ಪೆಕ್ಟರ್ ಬ್ಯಾಟರೇಗೌಡ ಮತ್ತು ಅವರ ತಂಡ ಮಾರೇಹಳ್ಳಿ ದೇವಸ್ಥಾನದ ಬಳಿ ಕಾರ್ಯಾಚರಣೆ ನಡೆಸಿ, ಒಂದು ಲಕ್ಷ ಮುಂಗಡ ಹಣ ಪಡೆಯುತ್ತಿದ್ದ ವೇಳೆ ಶಂಕರ್ ಮತ್ತು ಮನೋಹರ್ ಅವರನ್ನು ಬಂಧಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು