ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ

Team Newsnap
1 Min Read
Acceptance of Bribery: Assistant Controller of Legal Metrology Department to Lokayukta trap ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ

8,000 ರೂಪಾಯಿ ಲಂಚ ಪಡೆಯುವಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಮಾಲಾ ಕಿರಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ.17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ ! 

ಶಿಡ್ಲಘಟ್ಟ ರಸ್ತೆಯಲ್ಲಿರುವ ಬಸವೇಶ್ವರ ಫ್ಯೂಯಲ್ ಸೆಂಟರ್‌ನಲ್ಲಿ ಪೆಟ್ರೋಲ್ ಬಂಕ್ ಮೀಟರ್ ನವೀಕರಣಕ್ಕೆ 8,000 ರು ಲಂಚಕ್ಕೆ ಮಾಲೀಕ ಜಯಸೂರ್ಯ ಬಳಿ ಬೇಡಿಕೆ ಇಟ್ಟಿದ್ದರು.

ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ಸೆರೆ ಹಿಡಿದು, ಬಂಧಿತ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾಲಾಕಿರಣ್‌ಗೆ ಸೇರಿದ ಬೆಂಗಳೂರಿನ ನಿವಾಸದ ಮೇಲೂ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಮನೆಯಲ್ಲಿ ದೊರೆಕಿದ ದಾಖಲೆಗಳ ಪರಿಶೀಲನೆ ನಡೆಸುತ್ತಿರುವುದಾಗಿ ಎಸ್ಪಿ ಪವನ್ ನೆಜ್ಜೂರು ಹೇಳಿದ್ದಾರೆ.

Share This Article
Leave a comment