March 10, 2026

Newsnap Kannada

The World at your finger tips!

kolar, lokayukta , SDA

2.5 ಲಕ್ಷ ಲಂಚ ಸ್ವೀಕಾರ – ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಲೋಕಾಯುಕ್ತ ಬಲೆಗೆ

Spread the love

ಬೆಂಗಳೂರು: ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಜಮೀನು ಪೌತಿ ಖಾತೆ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ.

ಲಂಚ ಸ್ವೀಕರಿಸುತ್ತಿದ್ದವರು ಎಳುವಳ್ಳಿ ಗ್ರಾಮ ಲೆಕ್ಕಾಧಿಕಾರಿ ಮಡಿವಾಳಪ್ಪ ಹಾಗೂ ವಿಜಯಪುರ ಗ್ರಾಮ ಲೆಕ್ಕಾಧಿಕಾರಿ ಸುನಿಲ್ ಎಂದು ಗುರುತಿಸಲಾಗಿದೆ. ಇವರ ಜೊತೆಗೆ ಆರ್‌ಐ ಸತ್ಯನಾರಾಯಣ ಕೂಡ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ದಾಳಿ ಬಳಿಕ ಸತ್ಯನಾರಾಯಣ ಪರಾರಿಯಾಗಿದ್ದಾರೆ.ಇದನ್ನು ಓದಿ –ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಳ

ಈ ಪ್ರಕರಣದಲ್ಲಿ ಗೌತಮ್ ಎಂಬ ವ್ಯಕ್ತಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ನಂತರ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಎಸ್ಪಿ ಪವನ್ ನೆಜ್ಜುರ್ ನೇತೃತ್ವದಲ್ಲಿ ನಡೆಸಲಾಗಿದೆ.

error: Content is protected !!