ಹಾಸನ : ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ಮದುವೆ ಮುಗಿಸಿ ಬೈಕ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ದಂಪತಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ .
ಇಂದು ಬೆಳಗ್ಗೆ ಉದಯಪುರದಲ್ಲಿ ಸಂಬಂಧಿಕರ ಮದುವೆಗೆ ಬೈಕ್‌ನಲ್ಲಿ ಚಂದ್ರೇಗೌಡ (52), ಹೇಮಲತಾ (45 ) ದಂಪತಿ ತೆರಳಿದ್ದರು.
ಮದುವೆ ಮುಗಿಸಿ ಮಧ್ಯಾಹ್ನದ ವೇಳೆಗೆ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಬರುವಾಗ ,ಬರಗೂರು ಹ್ಯಾಂಡ್‌ಪೋಸ್ಟ್ ಬಳಿಯ ತಿರುವಿನಲ್ಲಿ ತಮಿಳುನಾಡು ನೋಂದಣಿ ಇರುವ ಕಾರು ವೇಗವಾಗಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಒಂದು ಕಡೆ, ದಂಪತಿ ಒಂದು ಕಡೆ ರಸ್ತೆಗೆ ಬಿದ್ದಿದ್ದಾರೆ.
ದಂಪತಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವ ಆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ನಗರ ಠಾಣೆ ಇನ್ಸ್ಪೆಕ್ಟರ್ ರಘುಪತಿ ಹಾಗೂ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು , ಕಾರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ