ಸಂಪಾಜೆಯಲ್ಲಿ ಬಸ್ ಮತ್ತು ಕಾರು ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಮಂಡ್ಯ ಮೂಲದ ಮೂವರು ಮಕ್ಕಳೂ ಸೇರಿ 6 ಮಂದಿ ಮೃತಪಟ್ಟಿದ್ದಾರೆ.
ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದೆ, ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ ಹೇಳಲಾಗಿದೆ.
3 ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು ಹಾಗು ಎರಡು ಮಕ್ಕಳ ಮೃತದೇಹ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಒಬ್ಬರು ಪುರುಷ ಹಾಗು ಒಂದು ಮಗುವಿನ ಮೃತದೇಹ ಇದೆ. ಕಾರು ಮತ್ತು ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿತ್ತು.
ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ಸಾಗಿಸಿದರೂ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಮಂಡ್ಯ ಮೂಲದವರು ಎಂದು ಹೇಳಲಾಗಿದೆ ಹೆಚ್ಚಿನ ವಿವರ ಲಭ್ಯವಾಗಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು