ಬೆಂಗಳೂರು : ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.
ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮೂಲತಃ ಕನ್ನಡತಿಯಾದರೂ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಇಬ್ಬರು ಮಕ್ಕಳು ಇದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಕನ್ನಡದ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ