crime

ಹಲಗೂರು ಸಮೀಪ ಕಾರು ಪಲ್ಟಿಯಾಗಿ ಓರ್ವ ಮಹಿಳೆ ಸಾವು : 7 ಮಂದಿಗೆ ಗಂಭೀರ ಗಾಯ

ಹಲಗೂರು ಸಮೀಪದ ಲಂಬಾಣಿ ಹೊಸದೊಡ್ಡಿ ಹಾಗೂ ಕೃಷ್ಣೇ ಗೌಡನ ದೊಡ್ಡಿ ಮಾರ್ಗ ಮಧ್ಯೆ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಜರುಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ಸಾತನೂರು ಹೋಬಳಿಯ  ಕಬ್ಬಾಳು ಗ್ರಾಮದ ವೀರಭದ್ರ ಗೌಡರ ಪತ್ನಿ ನಾಗಮ್ಮ (45) ಎಂಬುವವರು ಮೃತ ಪಟ್ಟ ದುರ್ದೈವಿ.

ಕಾರಿನಲ್ಲಿದ್ದ ಕನಕಪುರ ತಾಲ್ಲೂಕು ಮಲ್ಲಪುರ ಗ್ರಾಮದ ಕುಮಾರ್(27),ಸುಮಿತ್ರ (37), ಸುಜಾತ (30),ಪುಷ್ಪ(25),ಪೂಜಾ(18), ಕೆಂಪಮ್ಮ(47) ಇಬ್ಬರು ಮಕ್ಕಳಾದ ನಕ್ಷತ್ರ(02) ,ಆಯುಷ್,(04) ಗಂಭೀರ ಗಾಯಗೊಂಡವರನ್ನು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ

ಸಮೀಪದ ಮುತ್ತತ್ತಿಯಲ್ಲಿ ಬೀಗರ ಔತಣಕೂಟ ಮುಗಿಸಿ ವಾಪಸ್ಸು ಲಂಬಾಣಿ ಹೊಸ ದೊಡ್ಡಿ ಮತ್ತು ಕೃಷ್ಣೇಗೌಡನ ದೊಡ್ಡಿಯ ಮಾರ್ಗ ಮಧ್ಯೆ ಕಾರಿನ ಹಿಂಭಾಗದ ಚಕ್ರ ಸಿಡಿದು ಈ ಘಟನೆ ಸಂಭವಿಸಿದೆ .

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024