December 25, 2024

Newsnap Kannada

The World at your finger tips!

car acc1

ಮಳೆಯ ಕಿರಿಕಿರಿ – ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

Spread the love

ಬಸ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ BDA ಟೋಲ್ ಬಳಿ ನಡೆದಿದೆ. ಈ ಘಟನೆಯಲ್ಲಿ ಸುಮುಖ್ (22) ಹಾಗೂ ಲೀನಾ ನಾಯ್ಡು (19) ಮೃತ ದುರ್ದೈವಿಗಳು.

ಪಿಇಎಸ್ ಕಾಲೇಜು ಕಡೆಯಿಂದ ಸೋಂಪುರ ಮಾರ್ಗವಾಗಿ ಸಾಗುತ್ತಿದ್ದಾಗ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿ ಎದುರು ಮಾರ್ಗದಿಂದ ಬರುತ್ತಿದ್ದ ಬಸ್​ಗೆ ಹೋಂಡಾ ಸಿಟಿ ಕಾರು ಡಿಕ್ಕಿ ಹೊಡೆದಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಎದುರುಗಡೆ ಬರುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದಿದೆ.

ಬಸ್ ಚಾಲಕನ ಕಾಲಿಗೆ ಗಾಯವಾಗಿದ್ದು. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜು-ಗುಜ್ಜು ಆಗಿ ಹೋಗಿದೆ. ಕೆಂಗೇರಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!